ನ್ಯೂಜಿಲೆಂಡ್ ವಿರುದ್ಧ ಜಯಭೇರಿ: ಚಾಂಪಿಯನ್ ಶಿಪ್ ಗೆದ್ದ ಟೀಮ್ ಇಂಡಿಯಾ

ದುಬೈ: ಭಾರತ ಕ್ರಿಕೆಟ್ ತಂಡ ಕೊನೆಗೂ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಕಳೆದ 9 ತಿಂಗಳೊಳಗೆ ಎರಡನೇ ಟ್ರೋಫಿಯನ್ನು ಗೆದ್ದು ಬೀಗಿದೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಾರ್ಚ್ 9 ರ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ, ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಜಯಭೇರಿ ಭಾರಿಸಿ ಚಾಂಪಿಯನ್ ಶಿಪನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ 25 ವರ್ಷಗಳ ಹಿಂದೆ ಇದೇ ಟೂರ್ನಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೋಲಿಗೆ ಟೀಂ ಇಂಡಿಯಾ ಸೇಡು ತೀರಿಸಿಕೊಂಡಿದೆ.

ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ರೋಹಿತ್ ಶರ್ಮಾ ತಂಡ ಸೋಲಿಸಿದೆ. ಇಡೀ ಟೂರ್ನಿಯಲ್ಲಿ ಸಾಂಘಿಕ ಪ್ರದರ್ಶನ ನೀಡಿದ ರೋಹಿತ್ ಪಡೆ ಎಲ್ಲಾ ಪಂದ್ಯಗಳಲ್ಲಿ ಗೆದ್ದು ಬೀಗಿದೆ.

Related posts