ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವಲ್ಲಿ ಭಾರತೀಯ ಜನತಾ ಪಕ್ಷ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಕಸರತ್ತು ನಡೆಸಿದೆ. ಮಧ್ಯಪ್ರದೇಶ ವಿಧಾನಸಭಾ ಅಖಾಡಕ್ಕೆ 92 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಅಂತಿಮಗೊಳಿಸಿದೆ. ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ವಾರಾಂತ್ಯದಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.
ಮಧ್ಯಪ್ರದೇಶದ 94 ವಿಧಾನಸಭಾ ಸ್ಥಾನಗಳಿಗೆ ಈಗಾಗಲೇ 92 ಹೆಸರುಗಳು ಅಂತಿಮಗೊಂಡಿದೆ. ಎಲ್ಲವೂ ಸರಿಯಾಗಿ ನಡೆದರೆ, ಈ ಅಭ್ಯರ್ಥಿಗಳನ್ನು ಮಧ್ಯಪ್ರದೇಶದ ಐದನೇ ಪಟ್ಟಿಯಲ್ಲಿ ಪ್ರಕಟಿಸಲಾಗುವುದು. ನವೆಂಬರ್ 17 ರಂದು ನಡೆಯಲಿರುವ 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ 136 ಹೆಸರುಗಳು ಸೇರಿದಂತೆ ನಾಲ್ಕು ಪಟ್ಟಿಗಳನ್ನು ಬಿಡುಗಡೆ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಾಜಸ್ಥಾನ ಅಸೆಂಬ್ಲಿ ಚುನಾವಣೆಗೆ ಸಂಬಂಧಿಸಿದಂತೆ, ಸಿಇಸಿ ಸಭೆಯಲ್ಲಿ 84ಕ್ಕೂ ಹೆಚ್ಚು ಸ್ಥಾನಗಳ ಬಗ್ಗೆ ಚರ್ಚೆಗಳು ನಡೆದವು, ಈ ಪೈಕಿ ಸರಿಸುಮಾರು 79 ಸ್ಥಾನಗಳಿಗೆ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ರಾಜಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದೆ, ಅಕ್ಟೋಬರ್ 9 ರಂದು ಮೊದಲ ಪಟ್ಟಿಯಲ್ಲಿ 41 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ರಾಜಸ್ಥಾನವು ರಾಜ್ಯ ವಿಧಾನಸಭೆಗೆ 200 ಸದಸ್ಯರನ್ನು ಆಯ್ಕೆ ಮಾಡಲು ನವೆಂಬರ್ 25 ರಂದು ಚುನಾವಣೆ ನಡೆಯಲಿದೆ.
ತೆಲಂಗಾಣ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ನಿರ್ಧರಿಸಲು ಬಿಜೆಪಿ ಇನ್ನೂ ಕಸರತ್ತಿನಲ್ಲಿ ತೊಡಗಿದೆ. ತೆಲಂಗಾಣದಲ್ಲಿ ನವೆಂಬರ್ 30ರಂದು ಚುನಾವಣೆ ನಡೆಯಲಿದೆ.