ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಒಡ್ಡಿರುವ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮುನಿರತ್ನ ಅವರನ್ನು ಪೊಲೀಸರು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.
ಈ ನಡುವೆ, ಮುನಿರತ್ನ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಬುಧವಾರ ವಿಚಾರಣೆಗೆ ಬರಲಿದೆ.