ಬೆಂಗಳೂರು: ಪರಿಶಿಷ್ಟ ಜಾತಿಯವರ ಜನಗಣತಿ ಕಾರ್ಯವನ್ನು ಸಮರ್ಪಕವಾಗಿ ನಡೆಸಲಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಸಮೀಕ್ಷೆ ಕೈಗೊಳ್ಳುವವರು ಮಾಹಿತಿ ಸಂಗ್ರಹಿಸದೇ ಮನೆಗಳಲ್ಲಿ ಸ್ಟಿಕ್ಕರ್ ಅಂಟಿಸಿ ಹೊಂದುತ್ತಿದ್ದಾರೆ. ಪರಿಶಿಷ್ಟ ಜಾತಿಯವರಲ್ಲದವರ ಮನೆಗಳಿಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷೆ ನಡೆಸುತ್ತಿರುವವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂಬ ಆರೋಪವೂ ಪ್ರತಿಧ್ವನಿಸಿದೆ.
ಈ ಬಗ್ಗೆ ಆಕ್ರೋಶ ಹೊರ ಹಾಕಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪ’ರಿಶಿಷ್ಟ ಜಾತಿಯವರ ಮನೆಗೆ ಬಂದು ಸ್ಟಿಕರ್ ಅಂಟಿಸಿ ಹೋಗಿದ್ದರೆ ಅದನ್ನು ಒಪ್ಪಬಹುದಿತ್ತು, ಆದರೆ ಎಲ್ಲಾ ಮನೆಗಳಿಗೂ ಸರ್ಕಾರ ಸ್ಟಿಕರ್ ಅಂಟಿಸಿಕೊಂಡು ಹೋಗುತ್ತಿದ್ದಾರೆ. ಪರಿಶಿಷ್ಟ ಜಾತಿಯೇತರ ಮನೆಗಳಿಗೂ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
ಪರಿಶಿಷ್ಟ ಜಾತಿಯವರ ಮನೆಗೆ ಬಂದು ಸ್ಟಿಕರ್ ಅಂಟಿಸಿ ಹೋಗಿದ್ದರೆ ಅದನ್ನು ಒಪ್ಪಬಹುದಿತ್ತು, ಆದರೆ ಎಲ್ಲಾ ಮನೆಗಳಿಗೂ ಸರ್ಕಾರ ಸ್ಟಿಕರ್ ಅಂಟಿಸಿಕೊಂಡು ಹೋಗುತ್ತಿದೆ. ಪರಿಶಿಷ್ಟ ಜಾತಿಯೇತರ ಮನೆಗಳಿಗೂ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ.
ಆನ್‍ಲೈನ್‍ನಲ್ಲೂ ಅವಕಾಶ ಇದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಆದರೆ, ಅಲ್ಲಿ ಪರಿಶಿಷ್ಟ ಜಾತಿ… pic.twitter.com/RqT7o0azFx
— BJP Karnataka (@BJP4Karnataka) July 4, 2025
ಆನ್‍ಲೈನ್‍ನಲ್ಲೂ ಅವಕಾಶ ಇದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಆದರೆ, ಅಲ್ಲಿ ಪರಿಶಿಷ್ಟ ಜಾತಿ ಸರ್ಟಿಫಿಕೇಟ್ ನಂಬರ್ ಹೇಳಬೇಕು. ಬೇರೆ ಬೇರೆ ಮಾಹಿತಿ ಕೇಳುತ್ತದೆ. ಅದನ್ನು ಒದಗಿಸಲು ಸಾಧ್ಯವೇ ಇಲ್ಲ. ಇದು ಸರ್ಕಾರದ ಕಣ್ಣೊರೆಸುವ ತಂತ್ರವೇ ಹೊರತು ಇದರಲ್ಲಿ ಸರಿಯಾದ ಅಂಕಿ-ಅಂಶ ಸಿಗಲು ಸಾಧ್ಯವಿಲ್ಲ ಎಂದವರು, ಪ್ರತಿಪಾದಿಸಿದ್ದಾರೆ.