ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಲೆಯಲ್ಲಿ ಸಂಸತ್‌ನ ವಿಶೇಷ ಅಧಿವೇಶನ ಕರೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಭಯೋತ್ಪಾದನೆ ವಿರುದ್ಧ ಪರಿಣಾಮಕಾರ ಸಮರ ನಡೆಸುವ ಅನಿವಾರ್ಯತೆ ಇದ್ದು, ಈ ಸಂಬಂಧ ಸರ್ವಪಕ್ಷ ಸಭೆ ಕರೆದಿದ್ದ ಕೇಂದ್ರ ಸರ್ಕಾರ ಇದೀಗ ಸಂಸತ್ ವಿಶೇಷ ಅಧಿವೇಶನ ಕರೆದು ಮಹತ್ವದ ಕ್ರಮಗಳನ್ನು ಕೈಗೊಳ್ಳಲು ಸಿದ್ದತೆ ನಡೆಸುತ್ತಿದೆ ಎನ್ನಲಾಗಿದೆ.
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಇಡೀ ಜಗತ್ತಿಗೆ ಒಗ್ಗಟ್ಟಿನ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಸಂಸತ್ತಿನ ಅಧಿವೇಶನವನ್ನು ಕರೆಯಬೇಕಿದೆ ಎಂಬುದು ತಜ್ಞರ ಸಲಹೆಯಾಗಿದೆ. ಈ ಅಧಿವೇಶನದಲ್ಲಿ ಅತ್ಯಂತ ಮಹತ್ವದ ನಿರ್ಣಯ ಅಂಗೀಕರಿಸಲು ಪ್ರಧಾನಿ ಮೋದಿ ಕೂಡಾ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.