ಕೋಲ್ಕತಾ: ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ, ಪಿಎಂ ಕೇರ್ಸ್ ನಿಧಿಯ ಲೆಕ್ಕ ಕೇಳಿದ್ದಾರೆ.
ಕೊಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ಕಾರ್ಯವೈಖರಿ ವಿರುದ್ಧ ಅಸಮಾಧಾನ ಹೊರಹಾಕಿದರು. ಪಿಎಂ ಕೇರ್ಸ್ ನಿಧಿಯ ಹಣ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದ ಅವರು, ಈ ಬಗ್ಗೆ ಜನತೆಗೆ ತಿಳಿಸಬೇಕು ಎಂದು ಮೋದಿ ಸರ್ಕಾರವನ್ನು ಒತ್ತಾಯಿಸಿದರು.
ಪಿಎಂ ಕೇರ್ಸ್ ಫಂಡ್ನ ಲಕ್ಷ ಕೋಟಿ ಹಣ ಎಲ್ಲಿ ಹೋಯಿತು? ಏಕೆ ಆಡಿಟ್ ಮಾಡಲಿಲ್ಲ? ಮಮತಾ ಬ್ಯಾನರ್ಜಿ ಪ್ರಶ್ನಿಸಿದ ಮಮತಾ ಬ್ಯಾನರ್ಜಿ, ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಕೇಂದ್ರ ಸರ್ಕಾರ ನಮಗೆ ಏನು ನೀಡಿದೆ? ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಲು ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದೂ ಅವರು ಆರೋಪಿಸಿದರು.