ವಾಷಿಂಗ್ಟನ್: ಉಕ್ರೇನ್‌ಗೆ ಹೆಚ್ಚುವರಿ ಶಸ್ತ್ರಾಸ್ತ್ರಗಳನ್ನು ಕಳುಹಿಸಲು ಅನುಮೋದನೆ ನೀಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದರ ಜೊತೆಗೆ ರಷ್ಯಾದ ಮೇಲೆ ಹೊಸ ನಿರ್ಬಂಧ ಹೆರುವ ಬಗ್ಗೆ ಅವರು ಸುಳಿವು ನೀಡಿದ್ದಾರೆ.
“ನಾವು ಉಕ್ರೇನ್‌ಗೆ ಕೆಲವು ರಕ್ಷಣಾತ್ಮಕ ಶಸ್ತ್ರಾಸ್ತ್ರಗಳನ್ನು ಕಳುಹಿಸುತ್ತಿದ್ದೇವೆ ಮತ್ತು ನಾನು ಅದನ್ನು ಅನುಮೋದಿಸಿದ್ದೇನೆ” ಎಂದು ಟ್ರಂಪ್ ಮಂಗಳವಾರ ಶ್ವೇತಭವನದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಬಗ್ಗೆಯೂ ಟ್ರಂಪ್ ಅತೃಪ್ತಿ ವ್ಯಕ್ತಪಡಿಸಿದ್ದಾರೆ. “ನಾನು ಪುಟಿನ್ ಬಗ್ಗೆ ಸಂತೋಷವಾಗಿಲ್ಲ. ನಾನು ಈಗ ನಿಮಗೆ ಅಷ್ಟನ್ನು ಹೇಳಬಲ್ಲೆ” ಎಂದು ಟ್ರಂಪ್ ಹೇಳಿದ್ದಾರೆ. ರಷ್ಯಾ ಮತ್ತು ಉಕ್ರೇನಿಯನ್ ಸೈನಿಕರು ಸಾವಿರಾರು ಸಂಖ್ಯೆಯಲ್ಲಿ ಸಾಯುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಷ್ಯಾದ ಮೇಲೆ ವ್ಯಾಪಕ ನಿರ್ಬಂಧಗಳನ್ನು ವಿಧಿಸುವ ದ್ವಿಪಕ್ಷೀಯ ಸೆನೆಟ್ ಮಸೂದೆಯನ್ನು ಬೆಂಬಲಿಸಬೇಕೆ ಎಂದು ಟ್ರಂಪ್ ಕೂಡ ಪರಿಗಣಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.