ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಖಾಲಿ ಹುದ್ದೆ; ಮೊದಲನೇ ಹಂತದಲ್ಲಿ 3-4 ಸಾವಿರ ಪೇದೆಗಳ ನೇಮಕ

ಮೈಸೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದರು.

ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳು ಖಾಲಿ ಇದ್ದು, ಮೊದಲನೇ ಹಂತದಲ್ಲಿ 3-4 ಸಾವಿರ ಪೇದೆಗಳ ನೇಮಕ ಮಾಡಲಾಗುವುದು. 400 ಸಬ್ ಇನ್ಸ್ಪೆಕ್ಟರ್ ಹುದ್ದೆಗನ್ನು ಭರ್ತಿ ಮಾಡಲಾಗುವುದೆಂದು ತಿಳಿಸಿದರು.

Related posts