ಪ್ರಾಸಿಕ್ಯೂಷನ್ ಬೆನ್ನಲ್ಲೇ ರಾಜ್ಯಪಾಲರ ಮತ್ತೊಂದು ಕ್ರಮ; ಸಿದ್ದು ಸರ್ಕಾರದ 11 ಮಸೂದೆಗಳು ವಾಪಸ್

ಬೆಂಗಳೂರು: ಮುಡಾ ನಿವೇಶನ ಅಕ್ರಮ ಆರೋಪ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್‌ ಕಳುಹಿಸಿದ್ದಾರೆ. ಈ ಮೂಲಕ ಸರ್ಕಾರ ಮತ್ತು ರಾಜಭವನ ನಡುವಿನ ಸಂಘರ್ಷ ತೀವ್ತಗೊಂಡಂತೆ ಭಾಸವಾಗುತ್ತಿದೆ.

ಆಗಸ್ಟ್‌ ತಿಂಗಳಲ್ಲಿ ರಾಜ್ಯಪಾಲರು 6 ಪ್ರಮುಖ ಮಸೂದೆಗಳನ್ನು ಹಿಂತಿರುಗಿಸಿದ್ದಾರೆ. ಒಟ್ಟು 11 ವಿಧೇಯಕಗಳನ್ನು ರಾಜ್ಯಪಾಲರು ವಾಪಸ್‌ ಕಳಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕ ಸಾರ್ವಜನಿಕ ಭ್ರಷ್ಟಾಚಾರ ತಡೆ ವಿಧೇಯಕ, ಕರ್ನಾಟಕ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ, ಕರ್ನಾಟಕ ಟೌನ್‌ ಆಂಡ್‌ ಕಂಟ್ರೀ ಪ್ಲಾನಿಂಗ್‌ ವಿಧೇಯಕ, ಕರ್ನಾಟಕ ಶಾಸಕಾಂಗ ಸದಸ್ಯರ ಅನರ್ಹತೆ ತಡೆ ವಿಧೇಯಕ, ಕರ್ನಾಟಕ ಪುರಸಭಗಳು ಮತ್ತು ಇತರೇ ಕೆಲವು ಕಾನೂನು ವಿಧೇಯಕ, ಕರ್ನಾಟಕ ಚಲನಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ ಕಲ್ಯಾಣ ವಿಧೇಯಕ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಗದಗ ಬೆಟಗೇರಿ ವ್ಯಾಪಾರ ಸಂಸ್ಕೃತಿ ಪ್ರದರ್ಶನ ಪ್ರಾಧಿಕಾರ ವಿಧೇಯಕ, ಕರ್ನಾಟಕ ನೋಂದಣಿ ತಿದ್ದುಪಡಿ ವಿಧೇಯಕಗಳನ್ನು ರಾಜ್ಯಪಾಲರು ಇದುವರೆಗೆ ವಾಪಸ್‌ ಮಾಡಿದ್ದಾರೆ ಎನ್ನಲಾಗಿದೆ.

Related posts