ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ನಾಲ್ಕು ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿ ತೀರದಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲೂ ನಾಲ್ಕು ದಿನಗಳ ಕಾಲ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts