ಬಳ್ಳಾರಿ ಘಟನೆ: ಗುಂಪುಘರ್ಷಣೆ ತನಿಖೆಗೆ ಸೂಚನೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಹಾಗೂ ಗೋಲಿಬಾರ್ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಎಂಬ ಯುವಕ ಮೃತಪಟ್ಟಿರುವುದು ಅತ್ಯಂತ ದುಃಖಕರ ಸಂಗತಿ ಎಂದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಆರಂಭಿಸಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು, ಹೇಗೆ ಬಳಸಲಾಗಿದೆ ಎಂಬ ಎಲ್ಲ ಅಂಶಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಯತ್ನಿಸಿದ ವೇಳೆ ಅದು ತಪ್ಪಾಗಿ ರಾಜಶೇಖರ್‌ಗೆ ತಗುಲಿರುವ ಸಾಧ್ಯತೆಯೂ ಇದೆ. ಈ ಎಲ್ಲ ಅಂಶಗಳನ್ನು ತನಿಖೆಯ ಮೂಲಕ ಸ್ಪಷ್ಟಪಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯವಾಗಿದ್ದು, ತಪ್ಪಿತಸ್ಥರು ಯಾರು ಎನ್ನುವುದನ್ನು ಲೆಕ್ಕಿಸದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Related posts