ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದ ನಡೆದ ಭದ್ರತಾ ಪಡೆಗಳೊಂದಿಗಿನ ಎನ್’ಕೌಂಟರ್ ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.
ಶನಿವಾರ ನಸುಕಿನ ಜಾವ ಮೂವರು ಉಗ್ರರನ್ನು ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.