ಬಿಜೆಪಿ ಶಾಸಕ ಮುನಿರತ್ನ ನಿವಾಸಕ್ಕೆ ಎಸ್‌‍ಐಟಿ ಲಗ್ಗೆ

ಬೆಂಗಳೂರು: ಅತ್ಯಾಚಾರ, ಜಾತಿ ನಿಂದನೆ ಆರೋಪದಲ್ಲಿ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಶನಿವಾರ ಎಸ್‌‍ಐಟಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ. ಶನಿವಾರ ಬೆಳಿಗ್ಗೆ ಮುನಿರತ್ನ ಮನೆಗೆ ಲಗ್ಗೆ ಹಾಕಿರುವ ವಿಶೇಷ ತನಿಖಾ ತಂಡದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಮಲ್ಲೇಶ್ವರಂ ಸಮೀಪದ ವೈಯಾಲಿ ಕಾವಲ್‌ನಲ್ಲಿರುವ ಶಾಸಕ ಮುನಿರತ್ನ ಅವರ ನಿವಾಸ ಹಾಗೂ ಕಚೇರಿಗೆ ಎಸಿಪಿ ಕವಿತಾ ನೇತೃತ್ವದ ಎಸ್‌‍ಐಟಿ ತಂಡ ದಾಳಿ ನಡೆಸಿದೆ. ಎಫ್ಎಸ್ಎಲ್​ ತಂಡದ ಉಪಸ್ಥಿತಿಯಲ್ಲಿ ಎಸ್​ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ.

Related posts