ಬಿಜೆಪಿ ಹೋರಾಟಕ್ಕೆ ಸಂದ ಜಯ: ‘ಕ್ರೈಸ್ತ ಜಾತಿಯ ಜೊತೆಗೆ ಹಿಂದೂ ಜಾತಿ’ ವಿವಾದಕ್ಕೆ ತೆರೆ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗವು ಕ್ರೈಸ್ತ ಎಸ್‍ಸಿ ಜಾತಿಗಳನ್ನು ಜಾತಿ ಗಣತಿ ಪಟ್ಟಿಯಲ್ಲಿ ಮರೆಮಾಚಿರುವ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಕ್ರೈಸ್ತ ಜಾತಿಯ ಜೊತೆಗೆ ಹಿಂದೂ ಜಾತಿಯ ಹೆಸರುಗಳನ್ನು ನಮೂದಿಸಿದ್ದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿತ್ತು. ಈ ಸಂಬಂಧ ಬಿಜೆಪಿ ನಾಯಕರು ರಾಜ್ಯಪಾಲರಿಗೂ ದೂರು ನೀಡಿತ್ತು. ಇದೀಗ ಈ ತಪ್ಪನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸರಿಪಡಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಬಿಜೆಪಿ, ಇದು ತಮ್ಮ ಪಕ್ಷದ ಹೋರಾಟಕ್ಕೆ ಸಂದ ಜಯವಾಗಿದೆ ಎಂದಿದೆ.

ಮತಾಂತರಕ್ಕೆ ಪರೋಕ್ಷವಾಗಿ ಕುಮ್ಮಕ್ಕು ಕೊಡುವ ಈ ಪ್ರಯತ್ನದ ವಿರುದ್ಧ ಧ್ವನಿ ಎತ್ತಿದ ಎಲ್ಲಾ ಸಮಾಜಗಳ ಮಠಾಧೀಶರು, ಪ್ರಮುಖರು ಮತ್ತು ರಾಜಕೀಯ ನಾಯಕರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ತಡವಾಗಿಯಾದರೂ ಸಮಯೋಚಿತ ನಿರ್ಧಾರ ಕೈಗೊಂಡ ಆಯೋಗಕ್ಕೆ ಕೃತಜ್ಞತೆಗಳು ಎಂದಿದೆ.

Related posts