ಬಿಬಿಎಂಪಿ ಅಕ್ರಮ; ED ಕಾರ್ಯಾಚರಣೆ ಬಿರುಸು

ಬೆಂಗಳೂರು: ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರ ಕಚೇರಿ ಮೇಲೆ ಮಂಗಳವಾರ ದಾಳಿ ನಡೆಸಿ ಪರಿಶೀಲಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.
ಮಂಗಳವಾರ ಬೆಳಗ್ಗೆ ED ಅಧಿಕಾರಿಗಳ ತಂಡ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಕಚೇರಿಯಲ್ಲಿ ಶೋಧ ನಡೆಸಿದೆ.

ಬೋರ್‌ವೆಲ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಇಡಿ ಈ ಕಾರ್ಯಾಚರಣೆ ಕೈಗೊಂಡಿದೆ. ಬಿಬಿಎಂಪಿ ಕೊರೆಸಿದ್ದ ಬೋರ್‌ವೆಲ್‌ ಕೊರೆಸುವ ಯೋಜನೆಯ 960 ಕೋಟಿ ರೂಪಾಯಿ ಪೈಕಿ 400 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

2016ರಲ್ಲಿ ನಡೆದಿದೆ ಎನ್ನಲಾದ ಈ ಹಗರಣ ಆರೋಪ ಬಗ್ಗೆ ತನಿಖೆ ನಡೆಸುತ್ತಿರುವ ED ಅಧಿಕಾರಿಗಳು ಬಿಬಿಎಂಪಿಗೆ ಸಂಬಂಧಿಸಿದ ಸುಮಾರು ಆರು ಕಚೇರಿಗಳನ್ನು ಶೋಧಿಸಿದ್ದಾರೆ.

Related posts