ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲು

ಬೆಂಗಳೂರು: ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲಿನ ಸೇವೆಯನ್ನು ಒದಗಿಸಲಾಗಿದೆ. ಈ ಮೂಲಕ ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಕೇಂದ್ರ ರೈವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.

ಯಲಹಂಕದಿಂದ, ಯಶವಂತಪುರ ಮಾರ್ಗವಾಗಿ ಹೊರಡುವ ಈ ಮೆಮು ರೈಲು ವಿದ್ಯಾರ್ಥಿಗಳು, ದಿನಗೂಲಿ ಕಾರ್ಮಿಕರು, ಉದ್ಯೋಗಿಗಳು, ರೈತರು, ವ್ಯಾಪಾರಿಗಳು ಸೇರಿದಂತೆ ಮುಂತಾದ ಪ್ರಯಾಣಿಕರಿಗೆ ಕೈಗೆಟುಕುವ ಮತ್ತು ವಿಶ್ವಾಸಾರ್ಹ ಪ್ರಯಾಣದ ಆಯ್ಕೆಯನ್ನು ಒದಗಿಸಲಿದೆ ಎಂದವರು ಹೇಳಿದ್ದಾರೆ.

ಈ ಭಾಗದ ಪ್ರಯಾಣಿಕರು ಈ ನೂತನ ಮೆಮು ರೈಲಿನ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಳ್ಳಲು ಅನುಕೂಲವಾಗಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Related posts