ಬೆಂಗಳೂರು ದರೋಡೆ ಪ್ರಕರಣ; ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಬೆಂಗಳೂರು ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ನಗರ ಪೊಲೀಸರು ₹7.11 ಕೋಟಿ ನಗದು ವ್ಯಾನ್ ದರೋಡೆ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಈ ಇತ್ತೀಚಿನ ಬಂಧನಗಳಿಂದ ₹1.45 ಕೋಟಿ ಹಣ ಮರುಪಡೆಯಲಾಗಿದ್ದು, ಒಟ್ಟಾರೆಯಾಗಿ ಮರುಪಡೆದ ಹಣದ ಮೊತ್ತ ₹7.1 ಕೋಟಿಗೆ ತಲುಪಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ಹಂಚಿಕೊಂಡಿದೆ.

ಆರೋಪಿಗಳನ್ನು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಹಲವು ತಂಡಗಳ ಸಮನ್ವಯದಿಂದ ಪತ್ತೆ ಮಾಡಿ ಬಂಧಿಸಲಾಗಿದೆ. ಆರು ಮಂದಿಯನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts