ಬೆಂಗಳೂರು: ಅಪೂರ್ಣಗೊಂಡಿರುವ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಅನೇಕ ರಾದ್ಧಾಂತಗಳು ಸಂಭವಿಸಿದೆ. ಮುಳುಗುವ ಹಡಗನಂತಾಗಿರುವ ಬಿಜೆಪಿಯು ಈಗ ಸಾರ್ವಜನಿಕರ ರಕ್ಷಣೆಯನ್ನು ಪಣಕ್ಕಿಟ್ಟು ಜನರ ಜೀವದ ಜತೆ ಚೆಲ್ಲಾಟವಾಡುತ್ತಾ ಕಾಮಗಾರಿ ಪೂರ್ಣಗೊಳ್ಳದಿದ್ದರೂ ಹೆದ್ದಾರಿ ಉದ್ಘಾಟನೆಗೆ ಮುಂದಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕಟು ಟೀಕೆ ಮಾಡಿದ್ದಾರೆ.
ಮಾಧ್ಯಮ ಹೇಳಿಕೆ ನೀಡಿರುವ ಅವರು, ಪ್ರಚಾರ ಹಾಗೂ ಚುನಾವಣೆಗಾಗಿ ಅಪೂರ್ಣಗೊಂಡಿರುವ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಮಾಡಲಾಗುತ್ತಿದೆ ಎಂದು ರಾಜ್ಯದ ಆಡಳಿತಾರೂಢ ಬಿಜೆಪಿಯನ್ನು ಕೆಣಕಿದ್ದಾರೆ.
ಮೋದಿ ಅವರ ಸರ್ಕಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಮೂಲಕ 25 ಸಾವಿರ ಕೋಟಿ ಸಂಗ್ರಹಿಸುವ ಗುರಿ ಹೊಂದಿದೆ ಎಂದಿರುವ ಸುರ್ಜಿವಾಲ, ಭ್ರಷ್ಟ ಬಿಜೆಪಿ ಸರ್ಕಾರ ಮುಂಬರುವ ಕರ್ನಾಟಕ ಚುನಾವಣೆಯಲ್ಲಿ ಅವನತಿಯ ಹಾದಿಯಲ್ಲಿ ಸಾಗುತ್ತಿದ್ದು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರಲ್ಲದೆ, ಪ್ರಯಾಣಿಕರ ಜೀವವನ್ನು ಅಪಾಯಕ್ಕೆ ತಳ್ಳಿ ಅಪೂರ್ಣಗೊಂಡಿರುವ ಹೆದ್ದಾರಿ ಉದ್ಘಾಟನೆ ಮಾಡುತ್ತಿದ್ದು, ಟೋಲ್ ಹೆಸರಲ್ಲಿ ಕನ್ನಡಿಗರಿಂದ ಹಣ ಸಂಗ್ರಹಿಸಲು ಮುಂದಾಗಿರುವ ಬಿಜೆಪಿ ಅವೈಜ್ಞಾನಿಕ ರಸ್ತೆ ವಿನ್ಯಾಸ, ನೀರು ಸುಗಮವಾಗಿ ಹರಿದುಹೋಗಲು ಅವಕಾಶ ಕಲ್ಪಿಸಿಲ್ಲ. ಪ್ರವಾಹ ನಿಯಂತ್ರಣ ಮಾರ್ಗಸೂಚಿ ಅನುಸರಿಸಿಲ್ಲ. ಇನ್ನು ರೈತರು ತಮ್ಮ ಊರಿನಿಂದ ಪಟ್ಟಣಕ್ಕೆ ಹೋಗಲು ಸರಿಯಾದ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಲ್ಲ. ಈ ಎಲ್ಲ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಬಿಜೆಪಿ ಸರ್ಕಾರವು ಪ್ರಮುಖ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ ಎಂದಿದ್ದಾರೆ.
9/9
Q 8. The MP’s of Mandya & Mysore have deliberately shut their eyes to this man-made disaster created by the BJP.
Why are the Prime Minister and the BJP MP’s of Mandya and Mysore indifferent to the plight of commuters and farmers staring them in the face?FULL STATEMENT👇 pic.twitter.com/68ThoYyoBE
— Randeep Singh Surjewala (@rssurjewala) March 11, 2023
ಈ ಹೆದ್ದಾರಿ ಬಗೆಗಿನ ವಾಸ್ತವಾಂಶಗಳು ಏನೆಂಬ ಬಗ್ಗೆ ಸುರ್ಜೆವಾಲ ಅವರು ತಮ್ನದೇ ರೀತಿಯಲ್ಲಿ ವಿವರಿಸಿದ್ದಾರೆ.
-
2002ರಲ್ಲಿ ಕಾಂಗ್ರೆಸ್ ಸರ್ಕಾರ ಎರಡು ಪಥದ ರಾಜ್ಯ ಹೆದ್ದಾರಿಯನ್ನು ನಾಲ್ಕು ಪಥದ ಹೆದ್ದಾರಿಯನ್ನಾಗಿ ಮಾಡಿ, ಟೋಲ್ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು.
-
ಮಾರ್ಚ್ 04, 2014: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಒತ್ತಾಯದ ಮೇರೆಗೆ ರಾಜ್ಯ ಹೆದ್ದಾರಿಯಾಗಿದ್ದ ಬೆಂಗಳೂರು ಮೈಸೂರು ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ 275 ಆಗಿ ಅಧಿಸೂಚನೆ ಹೊರಡಿಸಿದರು.
-
ಅಕ್ಟೋಬರ್ 4, 2016ರ ವೇಳೆಗೆ: ರಾಜ್ಯದಲ್ಲಿದ್ದ ಕಾಂಗ್ರೆಸ್ ಸರ್ಕಾರ 4,400 ಕೋಟಿ ವೆಚ್ಚ ಮಾಡಿ 2500 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡಿತು.
-
ಫೆಬ್ರವರಿ 13, 2018: ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ 6420 ಕೋಟಿ ಹಣವನ್ನು ಮಂಜೂರು ಮಾಡಿತ್ತು.ಬೆಂಗಳೂರಿನಿಂದ ನಿಡಘಟ್ಟದ 56 ಕಿ.ಮೀ ಉದ್ದ ರಸ್ತೆಗೆ 3501 ಕೋಟಿನಿಡಘಟ್ಟದಿಂದ ಮೈಸೂರಿನ 62 ಕಿ.ಮೀ ಉದ್ದದ ರಸ್ತೆಗೆ 2919 ಕೋಟಿ ನೀಡಿತ್ತು.ಈಗ ಈ ರಸ್ತೆಯ ಒಟ್ಟು ವೆಚ್ಚ 10 ಸಾವಿರ ಕೋಟಿ ಅಂದಾಜು ಮಾಡಲಾಗಿದೆ.
-
ಮಾರ್ಚ್ 12, 2023ರಂದು: ಮೋದಿ ಹಾಗೂ ಬೊಮ್ಮಾಯಿ ಸರ್ಕಾರ ಅಪೂರ್ಣಗೊಂಡಿರುವ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ಉದ್ಘಾಟನೆ ಮಾಡುತ್ತಿವೆ. ಆಮೂಲಕ ಮುಂಬರುವ ಚುನಾವಣೆಯಲ್ಲಿ 40% ಕಮಿಷನ್ ಭ್ರಷ್ಟಾಚಾರದ ಹೊರತಾಗಿ ತಮ್ಮ ಸಾಧನೆ ಏನೂ ಇಲ್ಲದ ಕಾರಣ ಈ ಯೋಜನೆಯ ಪ್ರಚಾರ ಪಡೆಯಲು ಮುಂದಾಗಿದೆ.
Will PM Modi – CM Bommai answer#MysuruExpressway 👇🏼 pic.twitter.com/TLw5ow5ot8
— Randeep Singh Surjewala (@rssurjewala) March 11, 2023
ಈ ವಿಚಾರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬೊಮ್ಮಾಯಿ ಅವರ ಸರ್ಕಾರ ಉತ್ತರ ನೀಡಲಿ ಎಂದಿರುವ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ರಣದೀಪ್ ಅಇಂಗ್ ಸುರ್ಜೆವಾಲ ಅವರು ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
-
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಮಾರು 21 ಕಿ.ಮೀ (118 ಕಿ.ಮೀ ಪೈಕಿ) ಉದ್ದದಷ್ಟು ರಸ್ತೆ ವಿವಿಧ ಭಾಗಗಳಲ್ಲಿ ಅಪೂರ್ಣಗೊಂಡಿದೆ. ಈ ಕುರಿತ ಚಿತ್ರಗಳನ್ನು ಸೇರಿಸಲಾಗಿದೆ.ಅ ಪೂರ್ಣಗೊಂಡಿರುವ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದು ಚುನಾವಣೆ ಗಿಮಿಕ್ ಅಲ್ಲವೇ?
-
ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು- ಮೈಸೂರು ರಸ್ತೆ ಅಪೂರ್ಣಗೊಂಡಿದ್ದು, ಈ ರಸ್ತೆಯ ಅನೇಕ ಕಾಮಗಾರಿಗಳು ಪೂರ್ಣಗೊಂಡಿಲ್ಲ.50 ಅಂಡರ್ ಪಾಸ್ ಗಳ ಪೈಕಿ ಕೇವಲ 22 ಅಂಡರ್ ಪಾಸ್ ಮಾತ್ರ ಪೂರ್ಣಗೊಂಡಿದೆ.12 ಓವರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣಗೊಂಡಿವೆ.12 ಹಗುರ ವಾಹನ ಅಂಡರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣವಾಗಿವೆ.18 ಪಾದಚಾರಿ ಅಂಡರ್ ಪಾಸ್ ಗಳ ಪೈಕಿ ಕೇವಲ 8 ಮಾತ್ರ ಪೂರ್ಣಗೊಂಡಿವೆ. ಅಪೂರ್ಣಗೊಂಡಿರುವ, ಛಿದ್ರವಾಗಿರುವ ಹಾಗೂ ತೇಪೆಯಿಂದ ಕೂಡಿರುವ ರಾಷ್ಟ್ರೀಯ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದೇಕೆ?
-
118 ಕಿ.ಮೀ ಉದ್ದದ ಹೆದ್ದಾರಿಯ ಎರಡೂ ಭಾಗಗಳಲ್ಲಿ ಸರ್ವೀಸ್ ರಸ್ತೆ ಅಪೂರ್ಣಗೊಂಡಿದೆ. ಪರಿಣಾಮ ಈ ಹೆದ್ದಾರಿಯ ಭಾಗದ ರೈತರಿಗೆ, ನಿವಾಸಿಗಳಿಗೆ ತೊಂದರೆಯಾಗಿದ್ದು, ಜನಜೀವನ ಹಾಗೂ ದಿನನಿತ್ಯದ ಚಟುವಟಿಕೆಗೆ ತೊಡಕಾಗಿದೆ. ಪ್ರಧಾನಮಂತ್ರಿಗಳು ಸರ್ವೀಸ್ ರಸ್ತೆ ಪೂರ್ಣಗೊಳಿಸದೇ ರೈತರು, ಜನಸಾಮಾನ್ಯರ ರಕ್ಷಣೆ ಪಣಕ್ಕಿಟ್ಟಿರುವುದೇಕೆ?
-
ಬೆಂಗಳೂರು ಮೈಸೂರು ಹೆದ್ದಾರಿಯನ್ನು ಇಂಡಿಯನ್ ರೋಡ್ ಕಾಂಗ್ರೆಸ್ (IRC) ಗುಣಮಟ್ಟದಲ್ಲಿ ನಿರ್ಮಾಣ ಮಾಡಿಲ್ಲ. ಹಲವೆಡೆಗಳಲ್ಲಿ ಈ ಹೆದ್ದಾರಿ ನಿರ್ಮಾಣ ಅವೈಜ್ಞಾನಿಕವಾಗಿದೆ. ಅಲ್ಲದೆ ಕಳಪೆ ಗುಣಮಟ್ಟದ ಸಾಮಾಗ್ರಿ ಬಳಸಿದ್ದು, ಒಟ್ಟಾರೆ ರಸ್ತೆಯ ನಿರ್ಮಾಣ ಯೋಜನೆ ಕಳಪೆಯಾಗಿದೆ. 2022ರ ಅಕ್ಟೋಬರ್ ನಿಂದ ಇಲ್ಲಿಯವರೆಗೆ 300ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 90 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 122 ಜನರಿಗೆ ಗಂಭೀರ ಗಾಯಗಳಾಗಿವೆ.* ಆದರೂ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಯಾವುದೇ ಅಗತ್ಯ ಕ್ರಮ ಕೈಗೊಂಡಿಲ್ಲ.
-
ಪ್ರಧಾನಮಂತ್ರಿಗಳಿಗೆ ಸಾರ್ವಜನಿಕರ ರಕ್ಷಣೆಯನ್ನು ಅಪಾಯಕ್ಕೆ ಸಿಲುಕಿರುವ ಹಾಗೂ ಅಮಾಯಕ ಜೀವಗಳನ್ನು ಬಲಿಯಾಗುತ್ತಿರುವ ಬಗ್ಗೆ ಅರಿವಿಲ್ಲವೇಕೆ? ಸಂಚಾರಿ ಸಮೀಕ್ಷೆ ಪ್ರಕಾರ 2018ರಲ್ಲಿ ಈ ರಸ್ತೆಯಲ್ಲಿ 53 ಸಾವಿರ ಪ್ಯಾಸೆಂಜರ್ ಕಾರ್ ಯುನಿಟ್ (PCU) ನಷ್ಟಿದ್ದು ಇದು 2023ಕ್ಕೆ 90 ಸಾವಿರ ತಲುಪುವ ನಿರೀಕ್ಷೆ ಇದೆ. ಇದರ ಜತೆಗೆ ವಾಣಿಜ್ಯ ಉದ್ದೇಶಿತ ವಾಹನಗಳು ಸೇರ್ಪಡೆಯಾಗಲಿವೆ.
-
118 ಕಿ.ಮೀ ರಸ್ತೆಯ ಟೋಲ್ (56 ಕಿ.ಮೀ.ಗೆ 135 ಹಾಗೂ 62 ಕಿ.ಮೀ.ಗೆ 165) ಒಂದು ಕಡೆಗೆ ಸಾಗಲು 300 ರೂ. ನಿಗದಿ ಮಾಡಿದ್ದು, ಎರಡೂ ಕಡೆ ಓಡಾಡಲು ಕಾರಿಗೆ 600 ರೂ. ನಿಗದಿ ಮಾಡಲಾಗಿದೆ. ಇನ್ನು ಭಾರಿ ವಾಹನ ಹಾಗೂ ವಾಣಿಜ್ಯ ವಾಹನಗಳಿಗೆ ಒಂದು ಕಡೆಗೆ 2 ಸಾವಿರದಂತೆ ಎರಡೂ ಕಡೆ ಸಾಗಲು 4 ಸಾವಿರ ನಿಗದಿ ಮಾಡಲಾಗಿದೆ.ಈ ಲೆಕ್ಕಾಚಾರದಲ್ಲಿ 90 ಸಾವಿರ ಕಾರುಗಳಿಗೆ 600 ರೂನಂತೆ ಪ್ರತಿನಿತ್ಯ 5,40,00,000 (5.40 ಕೋಟಿ) ರೂ. ಸಂಗ್ರಹವಾಗಲಿದೆ. ಆಮೂಲಕ ವರ್ಷದ 365 ದಿನಕ್ಕೆ 1971 ಕೋಟಿಯಿಂದ 2 ಸಾವಿರ ಕೋಟಿಯಷ್ಟು ಸಂಗ್ರಹವಾಗಲಿದೆ.10 ವರ್ಷ ಟೋಲ್ ಸಂಗ್ರಹಿಸಿದರೆ 20 ಸಾವಿರ ಕೋಟಿ ಸಂಗ್ರಹವಾಗಲಿದ್ದು, ಪ್ರತಿ ಎರಡು ವರ್ಷಕ್ಕೊಮ್ಮೆ ಟೋಲ್ ದರ ಹೆಚ್ಚಳ ಮಾಡಿದಾಗ 110 ವರ್ಷಗಳಲ್ಲಿ ಸುಮಾರು 25 ಸಾವಿರ ಕೋಟಿ ಹಣವನ್ನು ಟೋಲ್ ಮೂಲಕ ಸಂಗ್ರಹವಾಗಲಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಿಂದ ಮೋದಿ ಸರ್ಕಾರ 15 ಸಾವಿರ ಕೋಟಿ ಲಾಭ ಮಾಡಲು ಮುಂದಾಗಿರುವುದೇಕೆ?
-
ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೆಚ್ಚ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 6420 ಕೋಟಿಯಷ್ಟಿತ್ತು. ಬಿಜೆಪಿ ಅವಧಿಯಲ್ಲಿ ಇದು 10 ಸಾವಿರ ಕೋಟಿಗೆ ಹೆಚ್ಚಾಗಿದೆ. ಈ ಹೆದ್ದಾರಿಯ ನಿರ್ಮಾಣದ ವೆಚ್ಚ ದುಪ್ಪಟ್ಟಾಗಲು ಕಾರಣವೇನು ಎಂದು ಪ್ರಧಾನಮಂತ್ರಿಗಳು ಉತ್ತರಿಸುವರೇ?*
-
2022ರ ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಬೆಂಗಳೂರು ಮೈಸೂರು ಹೆದ್ದಾರಿ ಬಳಿ ನೀರು ಸುಗಮವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸದ ಕಾರಣ ಕುಂಬಳಗೋಡು, ಇನೋರು ಪಾಳ್ಯ ಟೋಲ್ ಹಗೇಟೆ, ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಪ್ರವಾಹ ಉಂಟಾಗಿತ್ತು. ಇನ್ನು ಹೆದ್ದಾರಿಯ ಎರಡೂ ಬದಿಯಲ್ಲಿರುವ ರೈತರ ಕೃಷಿ ಭೂಮಿಗೆ ನೀರಾವರಿ ನೀರು ಹರಿಯಲು ಅಡ್ಡಿಯುಂಟಾಗಿದೆ. ಪರಿಣಾಮ ಪ್ರತಿ ಮಳೆಗಾಲದಲ್ಲೂ ಪ್ರವಾಹ ಪರಿಸ್ಥಿತಿ ಉದ್ಭವವಾಗಲಿದೆ. ಪ್ರವಾಹ ನಿಯಂತ್ರಣ ಮಾರ್ಗಸೂಚಿ ಅನುಸರಿಸದೇ, ಹೆದ್ದಾರಿಯ ಎರಡೂ ಬದಿಯ ರೈತರಿಗೆ ಸರಿಯಾದ ನೀರಾವರಿ ವ್ಯವಸ್ಥೆ ಕಲ್ಪಿಸದೇ ಪ್ರಧಾನಮಂತ್ರಿಗಳು ಈ ಹೆದ್ದಾರಿ ಉದ್ಘಾಟನೆ ಮಾಡುತ್ತಿರುವುದೇಕೆ?*
-
ಬಿಜೆಪಿ ಸರ್ಕಾರದ ಈ ಮಾನವ ನಿರ್ಮಿತ ಪ್ರವಾಹ ಪರಿಸ್ಥಿತಿಯನ್ನು ಕಂಡರೂ ಕಾಣದಂತೆ ಮಂಡ್ಯ ಹಾಗೂ ಮೈಸೂರು ಭಾಗದ ಸಂಸದರು ವರ್ತಿಸುತ್ತಿದ್ದಾರೆ. ಪ್ರಧಾನಮಂತ್ರಿಗಳು ಹಾಗೂ ಮಂಡ್ಯ ಮತ್ತು ಮೈಸೂರಿನ ಸಂಸದರು ಪ್ರಯಾಣಿಕರು ಹಾಗೂ ರೈತರ ದುರಾವಸ್ಥೆಯನ್ನು ಕಂಡರೂ ಈ ಬಗ್ಗೆ ಅಸಡ್ಡೆ ತೋರುತ್ತಿರುವುದೇಕೆ?