ಬೆಂಗಳೂರು ವಿವಿಗೆ ಮನಮೋಹನ್‌ ಸಿಂಗ್‌ ಹೆಸರು; ಸರ್ಕಾರದ ತೀರ್ಮಾನಕ್ಕೆ ಬಿಜೆಪಿ ಆಕ್ಷೇಪ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್‌ ಸಿಂಗ್‌ ಹೆಸರು ಸೂಕ್ತವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು ಬದಲಿಸುತ್ತಿದ್ದಾರೆ. ಪೂರ್ವಿಕರು ಇಟ್ಟ ಹೆಸರನ್ನು ಹೀಗೆ ಬದಲಿಸಬಾರದು. ಬೆಂಗಳೂರನ್ನು ಈಗಾಗಲೇ ಒಡೆದುಹಾಕಿದ್ದಾರೆ ಎಂದವರು ಹೇಳಿದರು.

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರನ್ನು ಒಂದಾಗಿಸಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವುದು ಬಿಟ್ಟು, ನಾಮಫಲಕ ಬದಲಿಸುವುದರಿಂದ ಕೋಟ್ಯಂತರ ರೂಪಾಯಿ ವ್ಯರ್ಥವಾಗಲಿದೆ. ದಕ್ಷಿಣ, ಉತ್ತರ ಎಂದು ಹೆಸರು ನೀಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ಜಾತಿ ಗಣತಿ ವರದಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ಮಾಡುವಾಗ ಇವರು ಮತ್ತೆ ಗಣತಿ ಮಾಡಿದರೆ ಅದಕ್ಕೆ ಕಿಮ್ಮತ್ತಿನ ಬೆಲೆ ಇಲ್ಲ. ಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದರು

Related posts