ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್​ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಟೀಸರ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

‘ಕಾಟೇರ’ ಸಿನಿಮಾದ ಬಿಗ್ ಸಕ್ಸಸ್ ನಂತರ ದರ್ಶನ್ ಶುರು ಮಾಡಿದ ಸಿನಿಮಾ ‘ದಿ ಡೆವಿಲ್’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದರೆ, ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರು. ಹಾಗಾಗಿ ಹಲವು ತಿಂಗಳ ಕಾಲ ‘ದಿ ಡೆವಿಲ್’ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.

Related posts