ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ: ರಾಜ್ಯದ 70ಕ್ಕೂ ಹೆಚ್ಚು ಕಡೆ ​ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಿಗ್ಗೆಯೇ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ರಾಜ್ಯಾದ್ಯಂತ ಏಕಕಾಲದಲ್ಲಿ 70ಕ್ಕೂ ಹೆಚ್ಚು ಕಡೆ ​ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದಿದ್ದು, ಬೆಳ್ಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಕೈಗೊಂಡಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಮಾಹಿತಿ ಹಿನ್ನೆಲೆ ಕ್ಕಾರ್ಯಾಚರಣೆ ಕೈಗೊಂಡಿರುವ ಲಿಕಾಯುಕ್ತ ಅಧಿಕಾರಿಗಳು ಬೆಂಗಳೂರಿನ ಮೂರು ಕಡೆ ಕೆ.ಆರ್.​ಪುರಂ ಬಳಿ ಎಆರ್​ಒಗೆ ಸೇರಿದ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ದಾವಣಗೆರೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಏಕಕಾಲಕ್ಕೆ 9 ಕಡೆಗಳಲ್ಲಿ ದಾಳಿ ನಡೆದಿದೆ. ಶಿವಾಜಿನಗರ, ದಾನೇಶ್ವರಿ ಪಾರ್ಕ್, ದಾನಮ್ಮ ದೇವಿ ದೇವಸ್ಥಾನ ಬಳಿ ಇರುವ ಅಧಿಕಾರಿಗಳ ಮನೆಗಳಲ್ಲಿ ಶೋಧ ನಡೆಸಲಾಗಿದೆ. ಹಾವೇರಿ RFO ಪರಮೇಶಪ್ಪ ಪೇರಲನವರ್ ಹಾಗೂ ನ್ಯಾಮತಿ RFO ಮಾಲತೇಶ್​ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿಇಬ್ಬರು ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಿತ್ರದುರ್ಗದ ಹಿರಿಯೂರಿನಲ್ಲಿ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದ ತಂಡ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ಲಗ್ಗೆ ಹಾಕಿ ದಾಖಲೆಗಳನ್ನು ಜಾಲಾಡಿದೆ.

ಕಲಬುರಗಿಯಲ್ಲಿ ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಮತ್ತು ದೇವದುರ್ಗದ KBJNL ಇಇ ತಿಪ್ಪಣ್ಣ ಅನ್ನದಾನಿ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ.

Related posts