ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ; ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ಲೋಕಾಯುಕ್ತ ಇಂದು ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಲೋಕಾಯುಕ್ತ ದಾಳಿ ಕೈಗೊಂಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಸಿಬ್ಬಂದಿ ಸುಮಾರು 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮೂರು ಕಡೆ ದಾಳಿ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್​​​.ಎಸ್​​.ಕೃಷ್ಣಮೂರ್ತಿ ಮನೆ ಹಾಗೂ ಕುಂಬಳಗೂಡು-ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧಿಕಾರಿ ಮನೆ ಮೇಲೂ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಬೆಸ್ಕಾಂ ಜಾಗೃತ ದಳ ಅಧಿಕಾರಿ T.N.ಸುಧಾಕರ್ ರೆಡ್ಡಿ ಮನೆ ಮೇಲೆ ದಾಳಿ ಕೈಗೊಂಡು ಮಾಡಿದ್ದು, ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮೇಲೆ ದಾಳಿ ಮಾಡಿದ್ದಾರೆ. ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಪರಿಶೀಲನೆ ನಡೆದಿದೆ.

ಬೀದರ್ ನಲ್ಲಿ ಪಶು ವೈಧ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್ ಮನೆ ಹಾಗೂ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ DRFO ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸಿದ್ದಾರೆ. .

Related posts