ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ದ ಕಾಂಗ್ರೆಸ್ ಹೋರಾಟ ಆರಂಭಿಸಿದೆ. ಬೆಂಗಳೂರಿನ ಟ್ರಿನಿಟಿ ವೃತದಲ್ಲಿ ಸೋಮವಾರ ನಡೆದ “ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ” ಪ್ರದರ್ಶನದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಸಚಿವ ದಿನೇಶ್ ಗುಂಡೂರಾವ್, ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಭಾಗವಹಿಸಿದ್ದರು.
‘ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ’: ಬಿಜೆಪಿ ಸರ್ಕಾರದ ವಿರುದ್ದ ‘ಕೈ’ ಹೋರಾಟ
