ಮಂಡ್ಯ ಬಂದ್; ಕಾವೇರಿ ಹೋರಾಟಕ್ಕೆ ಜೆಡಿಎಸ್ ಬೆಂಬಲ

ಬೆಂಗಳೂರು: ತಮಿಳುನಾಡಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಕಾವೇರಿ ನೀರು ಹರಿಸುತ್ತಿರುವುದನ್ನು ಪ್ರತಿಭಟಿಸಿ ಮಂಡ್ಯ ಜಿಲ್ಲೆಯ ಜನರು ನಡೆಸುತ್ತಿರುವ ಬಂದ್ ಗೆ ತಮ್ಮ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ನವದೆಹಲಿಯಿಂದಲೇ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಶನಿವಾರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ತಾವು ವಾಪಸ್ಸಾಗಲಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದಲೇ ನೇರವಾಗಿ ಮಂಡ್ಯಕ್ಕೆ ತೆರಳುವುದಾಗಿ ಹೇಳಿದ್ದಾರೆ.

ಸರ್ಕಾರದ ತಪ್ಪಿನಿಂದ ರಾಜ್ಯದ ಜನರು ದೊಡ್ಡ ಪ್ರಮಾಣದ ಜಲ ಸಂಕಷ್ಟಕ್ಕೆ ತುತ್ತಾಗಲಿದ್ದಾರೆ. ಈಗಾಗಲೇ ಭೀಕರ ಜಲಕ್ಷಾಮದ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿವೆ. ಆದರೂ ಸರಕಾರ ನಿರ್ಲಕ್ಷ್ಯ ಧೋರಣೆ ತಾಳಿದೆ. ಹಿಗಾಗಿ ಜನರು ಹೋರಾಟಕ್ಕೆ ಮುಂದಾಗಿದ್ದಾರೆ. ಜನರ ಜತೆ ನಿಲ್ಲುವುದು ನನ್ನ ಕರ್ತವ್ಯ. ಹೀಗಾಗಿ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಅವರು ತಿಳಿಸಿದ್ದಾರೆ.

Related posts