ಮಣಿಪುರ: ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಕ್ಷಿಪ್ರ ಬೆಳವಣಿಗೆಯಾಗಿದೆ. ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ 4 ದಿನಗಳ ನಂತರ ಇದೀಗ ಮಣಿಪುರ ರಾಜ್ಯದಲ್ಲಿ ರಾಷ್ರಪತಿ ಆಳ್ವಿಕೆ ಜಾರಿಯಾಗಿದೆ.
ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು. ಮಣಿಪುರ ರಾಜ್ಯವು ಸುಮಾರು 21 ತಿಂಗಳಿಂದ ಜನಾಂಗೀಯ ಹಿಂಸಾಚಾರದಿಂದ ನಲುಗಿದ್ದು, ಬಿರೇನ್ ಸಿಂಗ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಇದೀಗ ಕೇಂದ್ರ ಸರ್ಕಾರ ರಾಷ್ರಪತಿ ಆಳ್ವಿಕೆ ಜಾರಿ ಮಾಡಿದೆ.