ಮಣಿಪುರ ಹಿಂಸಾಚಾರ; ರಾಷ್ಟ್ರಪತಿ ಭೇಟಿಗೆ ಸಮಯ ಕೇಳಿದ ‘INDIA”

ನವದೆಹಲಿ: ಮಣಿಪುರ ಹಿಂಸಾಚಾರ ಮತ್ತು ಅಲ್ಲಿನ ಸಮಸ್ಯೆ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಪರವಾಗಿ ರಾಷ್ಟ್ರಪತಿ ಗಮನ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಈ ಸಂಬಂಧ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ದ್ರೌಪದಿ ಮುರ್ಮು ಅವರ ಭೇಟಿಗೆ ಸಮಯ ಕೇಳಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರದ ಕುರಿತು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸಮಗ್ರ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳು ಪಟ್ಟುಹಿಡಿದಿದ್ದು, ಸಂಸತ್ ಕಲಾಪಗಳಲ್ಲಿ ಗದ್ದಲ ಏರ್ಪಟ್ಟಿವೆ. ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸುತ್ತಲೇ ಪ್ರತಿಪಕ್ಷಗಳು ಒತ್ತಾಯಿಸುತ್ತಲೇ ಇವೆ.

ಈ ನಡುವೆ, ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿರೋಧ ಪಕ್ಷಗಳ “ಇಂಡಿಯ’ ಒಕ್ಕೂಟದ 21 ಸಂಸದರ ನಿಯೋಗವುಗಲಭೆ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯ ಬಗ್ಗೆ ಪರಿಶೀಲಿಸಿದೆ. ಈ ಬಗ್ಗೆ ರಾಷ್ಟ್ರಪತಿಗಳ ಮಧ್ಯಸ್ಥಿಕೆ ವಹಿಸಲು ಆಗ್ರಹಿಸುವ ಉದ್ದೇಶದಿಂದ ದ್ರೌಪದಿ ಮುರ್ಮು ಅವರ ಭೇಟಿಗೆ ಖರ್ಗೆ ಅವರು ಸಮಯ ಕೇಳಿದ್ದಾರೆ ಎನ್ನಲಾಗಿದೆ.

Related posts