ನವದೆಹಲಿ: ಉಗ್ರಪೋಷಿತ ಪಾಕಿಸ್ತಾನಕ್ಕೆ ಭಾರತ ಮತ್ತೊಂದು ಹೊಡೆತ ನೀಡಿದೆ. ಪಹಲ್ಗಾಮ್ ಉಗ್ರ ದಾಳಿ ಬಳಿಕ ಸಿಂಧೂ ನದಿಯ ನೀರು ಸ್ಥಗಿತ ಮಾಡಿರುವ ಭಾರತ ಇದೀಗ ಬಾಗ್ಲಿಹಾರ್ ಅಣೆಕಟ್ಟು ಸೇರಿದಂತೆ 2 ಅಣೆಕಟ್ಟುಗಳ ನೀರಿನ ಹರಿವನ್ನೂ ನಿಲ್ಲಿಸಿದೆ.
ಭಾರತವು ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ಮೂಲಕ ನೀರಿನ ಹರಿವನ್ನು ಸ್ಥಗಿತಗೊಳಿಸಿದೆ. ಜೊತೆಗೆ ಝೀಲಂ ನದಿಯ ಕಿಶನ್‌ಗಂಗಾ ಅಣೆಕಟ್ಟಿನಲ್ಲೂ ನೀರಿನ ಹರಿವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.