ಮುಂಬಯಿ: ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸಲಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ-ಶಿವಸೇನಾ ಮೈತ್ರಿಕೂಟ ಮಹಾಯುತಿ ಜಯಭೇರಿ ಭಾರಿಸಿದ್ದು ಮತ್ತೊಮ್ಮೆ ಅಧಿಕಾರಕ್ಕೇರಲು ರಂಗ ಸಜ್ಜಾಗಿದೆ.
ವಿಧಾನಸಭಾ ಚುನಾವಣೆಯ ಮತಗಳ ಎಣಿಕೆ ಶನಿವಾರ ನಡೆದಿದ್ದು, ಎಣಿಕೆಯುದ್ದಕ್ಕೂ ಮುನ್ನಡೆ ಕಾಯ್ದುಕೊಂಡು ಬಂದ ಎನ್‌ಡಿಎ ನಿರೀಕ್ಷೆಗೂ ಮೀರಿ ಸ್ಥಾನಗಳನ್ನು ಗೆದ್ದುಕೊಂಡಿದೆ.
ಫಲಿತಾಂಶ:
ಎನ್‌ಡಿಎ – 235,
ಎಂವಿಎ – 49
ಇತರರು -4
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ ಬೇಕಿರುವ ಮ್ಯಾಜಿಕ್ ಸಂಖ್ಯೆ 145. ಇದೀಗ ಬಹುಮತ ಗಳಿಸಿರುವ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರ ಹಿಡಿಯಲಿದೆ