ಮಹಿಳೆಯರ ಬೆತ್ತಲೆ ಮೆರವಣಿಗೆ ಕುರಿತು FIR ದಾಖಲಿಸುವಲ್ಲಿ ವಿಳಂಬ ಹಿನ್ನೆಲೆ; ಮಣಿಪುರ ಡಿಜಿಪಿಗೆ ಸುಪ್ರೀಂ ಬುಲಾವ್

ನವದೆಹಲಿ: ಮಣಿಪುರ ಹಿಂಸಾಚಾರ ಹಾಗೂ ಅಮಾನವೀಯ ಘಟನೆಗಳ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಕುರಿತು ಎಫ್ ಐಆರ್ ದಾಖಲಿಸುವಲ್ಲಿ ವಿಳಂಬವಾಗಿರುವುದಕ್ಕೆ ಕಿಡಿಕಾರಿರುವ ಸುಪ್ರೀಂಕೋರ್ಟ್, ಆಗಸ್ಟ್ 7 ರಂದು ನ್ಯಾಯಾಲಯದ ಮುಂದೆ ಹಾಜರಾಗಿ ಸಮಗ್ರ ವಿವರ ಒದಗಿಸಬೇಕು ಎಂದು ಮಣಿಪುರದ ಡಿಜಿಪಿಗೆ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠಡಾ ಮುಂದೆ ಈ ಪ್ರಕರಣ ಮಂಗಳವಾರ ವಿಚಾರಣೆಗೆ ಬಂದಿದೆ. ಈ ಸಂದರ್ಭದಲ್ಲಿ ಮಣಿಪುರ ಪೊಲೀಸರ ನಡೆ ಬಗ್ಗೆ ನ್ಯಾಯಪೀಠ ಅಸಮಾಧಾನ ಹೊರಹಾಕಿದೆ.
ಮೇ ತಿಂಗಳಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಸ್ಫೋಟಗೊಂಡ ನಂತರ 6,523 ಎಫ್‌ಐಆರ್‌ಗಳನ್ನು ದಾಖಲಿಸಿದೆ ಎಂದು ಮಣಿಪುರ ಸರ್ಕಾರ ನ್ಯಾಯಪೀಠ ಪೀಠಕ್ಕೆ ತಿಳಿಸಿತು. ವಿಡಿಯೋ ಪ್ರಕರಣದಲ್ಲಿ ಬಾಲಾಪರಾಧಿ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೊ ವೈರಲ್ ಆದ ನಂತರ ಮಹಿಳೆಯರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೇಂದ್ರ ಮತ್ತು ಮಣಿಪುರ ಸರ್ಕಾರದ ಪರವಾಗಿ ವಾದ ಮಂಡಿಸಿ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

Related posts