ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

ಬೆಂಗಳೂರು: ಮಾಜಿ ಸಚಿವ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ.

ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು.

92 ವರ್ಷ ವಯಸ್ಸಿನ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Related posts