ಮಾಸ್ಕ್ ಧರಿಸುವುದು ಕಡ್ಡಾಯ; ತಪ್ಪಿದಲ್ಲಿ 500 ರೂ. ದಂಡ

ಬೆಂಗಳೂರು: ಕೊರೋನಾ ವೈರಸ್ ಹರಡದಂತೆ ತಡೆಯಲು ವಾರಕಾಲ ಜಾರಿಯಲ್ಲಿದ್ದ ಲಾಕ್’ಡೌನ್ ತೆರವುಗೊಂಡಿದೆ. ಆದರೆ ಕಠಿಣ ನಿಯಮಗಳು ಜಾರಿಗೆ ಬಂದಿವೆ. ರಾತ್ರಿ ಉರ್ಫ್ಯೂ ಹಾಗೂ ಸಂಡೇ ಲಾಕ್’ಡೌನ್ ಮುಂದುವರಿಯಲಿದ್ದು ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಎಚ್ಚರಿಕೆಯ ಸಂದೇಶವನ್ನು ಸರ್ಕಾರ ರವಾನಿಸಿದೆ.

ಬೆಂಗಳೂರಿನಲ್ಲಿ ಕೋವಿಡ್-19 ಮುಂಜಾಗ್ರತಾ ನಿಯಮವಾಳಿ ಪಾಲನೆ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯವಾಗಿದೆ. ಈ ಹಿಂದೆ ಮಾಸ್ಕ್ ಧರಿಸದಿದ್ದರೆ ಮತ್ತು ಸಾಮಾಜಿಕ ಅಂತರ ಪಾಲಿಸದಿದ್ದರೆ 100 ರೂಪಾಯಿ ದಂಡ ವಿಧಿಸಲಾಗುತ್ತಿತ್ತು. ಇನ್ನು ಮುಂದೆ ಈ ಮೊತ್ತವನ್ನು 500 ರೂಪಾಯಿಗೆ ಏರಿಕೆ ಮಾಡಲಾಗಿದೆ.ಈ ನಿಯಮ ಪಾಲನೆ ಸಂಬಂಧ ಬಿಬಿಎಂಪಿಯು ಮಾರ್ಷಲ್ ಗಳ ಸಂಖ್ಯೆಯನ್ನು ಹೆಚ್ಚಿಸಿದೆ.

Related posts