ಮಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗುತ್ತಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ, ಕರಾವಳಿಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವವಿದ್ದು,ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಬಹುದು. ಈ ಹಿನ್ನೆಲೆಯಲ್ಲಿ ಸೂಕ್ತ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸಲಹೆ ನೀಡಲಾಗಿದೆ.