ಮೈಸೂರು: ತೀವ್ರ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನಿಧಿ ದುರ್ಬಳಕೆ ಕುರಿತಂತೆ ಕೇಂದ್ರೀಯ ತನಿಖಾ ದಳ (CBI) ಕೇಸ್ ದಾಖಲಿಸಿದೆ.
ಸುಮಾರು 300 ಕೋಟಿ ರೂ. ನಿಧಿಯನ್ನು ದುರ್ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಕೋರಿತ್ತು. 2009 ರಿಂದ 2016ರ ನಡುವಿನ ವ್ಯವಹಾರ ತನಿಖೆ ನಡೆಸುವಂತೆ ಕೋರಿ ಸಿಬಿಐಗೆ ರಾಜ್ಯ ಸರ್ಕಾರ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿರುವ ಸಿಬಿಐ ತನಿಖಾ ಪ್ರಕ್ರಿಯೆಯನ್ನು ಬಿರುಸುಗೊಳಿಸಿದೆ. .
ಕೆಎಸ್‌ಒಯು ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಯೋಜನೆಯಡಿ 2009-10 ರಿಂದ 2012-13 ರ ನಡುವೆ 250 ಕೋಟಿ ರೂ., 2013-14 ರಲ್ಲಿ 50 ಕೋಟಿ ರೂ. ಅಕ್ರಮ ಎಸಗಿರುವುದು ಲೆಕ್ಕ ಪರಿಶೋಧನೆ ವೇಳೆ ಬೆಳಕಿಗೆ ತ್ತು. ಈ ಬಗ್ಗೆ ಉನ್ನತಮಟ್ಟದ ತನಿಖೆಗೆ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 2009 ರಿಂದ 2016ರ ನಡುವಿನ ವ್ಯವಹಾರ ಕುರಿತು ತನಿಖೆ ನಡೆಸುವಂತೆ ಶಿಫಾರಸು ಮಾಡಿತ್ತು.