ಬೆಂಗಳೂರು: ಮುಡಾ ಹಗರಣದ ಸಂಬಂಧ ತನಿಖೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ.
ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ್ದ ಅನುಮೋದನೆಯನ್ನು ಹೈಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೂಡಾ, ಸಿದ್ದರಾಮಯ್ಯ ಪ್ರಕರಣ ಬಗ್ಗೆ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದೆ.
ಈ ಬೆಳವಣಿಗೆಯ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಶುಕ್ರವಾರ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಧರಣಿ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.