ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ಬಲಿಯಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಾಟದಿಂದ ಆತ್ಮಹತ್ಯೆಗೆ ಶರಣಾದವರ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲಿ ಮಾಹಿತಿ ಹಂಚಿಕೊಂಡ ಸಿಎಂ, “ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ಸರ್ಕಾರ ಈಗಾಗಲೇ ಕಠಿಣ ಕಾನೂನು ಜಾರಿಗೆ ತಂದಿದೆ. ಅದರ ಬಳಿಕ ಇಂತಹ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿದೆ” ಎಂದು ಹೇಳಿದರು.

Related posts