ಮೈಸೂರು: ಮೈಸೂರು ಅರಮನೆಮುಂಭಾಗದಲ್ಲಿ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.
ಮೈಸೂರು ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಬಲೂನ್ಗೆ ಗ್ಯಾಸ್ ತುಂಬುವ ವೇಳೆ ಸ್ಫೋಟ ಸಂಭವಿಸಿದೆ. ಅರಮನೆ ಮುಂಭಾಗ ಮಕ್ಕಳ ಆಟಿಕೆ ಸಾಮಾನುಗಳ ಮಾರಾಟ ಸ್ಥಳದಲ್ಲಿ, ಜನನಿಬಿಡ ಸ್ಥಳದಲ್ಲಿ ಹಿಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿದ್ದು, ಬಲೂನ್ ಮಾರುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಗಾಯಗೊಂಡಿದ್ದು ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ನಡೆಸಿದ್ದಾರೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
#WATCH | Karnataka | A helium cylinder explosion occurred in front of the Jayamarthanda gate of the Mysore Palace at around 8.30 pm. The balloon seller died on the spot and his identity is yet to be ascertained. Four others were immediately admitted to the hospital for treatment:… pic.twitter.com/EYZzH3SddK
— ANI (@ANI) December 25, 2025
