ರಾಗಿಗುಡ್ಡ ಗಲಭೆ ಪ್ರಕರಣ: ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನ ತಂಡ ಭೇಟಿ

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಗಲಭೆ ನಡೆದ ರಾಗಿಗುಡ್ಡಕ್ಕೆ ಗುರುವಾರ ಬಿಜೆಪಿ ನಾಯಕರನ್ನೊಳಗೊಂಡ ಸತ್ಯಶೋಧನ ತಂಡ ಭೇಟಿ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ, ಶಿವಮೊಗ್ಗಕ್ಕೆ ಭೇಟಿ ನೀಡುವ ಸತ್ಯಶೋಧನ ತಂಡದಲ್ಲಿ ನಳಿನ್‍ಕುಮಾರ್ ಕಟೀಲ್ ನೇತೃತ್ವದ ಈ ತಂಡದಲ್ಲಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಡಾ|| ಸಿ.ಎನ್. ಅಶ್ವತ್ಥನಾರಾಯಣ್, ರಾಜ್ಯದ ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಂಸದರಾದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಶಾಸಕರಾದ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಭಾರತಿ ಶೆಟ್ಟಿ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Related posts