ರಾಜ್ಯಕ್ಕೆ ಬರುವ ಪ್ರವಾಸಿಗರ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಭರವಸೆ

ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ಬಳಿ ಇಸ್ರೇಲಿ ಮಹಿಳೆ ಮೇಲೆ ನಡೆದಿರುವ ಅತ್ಯಾಚಾರ ಘಟನೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ ಎಂದವರು ಹೇಳಿದ್ದಾರೆ.

ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ ಎಂದಿರುವ ಸಿಎಂ, ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದವರು ಭರವಸೆ ನೀಡಿದ್ದಾರೆ.

Related posts