ರಾಜ್ಯದಲ್ಲಿ ಭಾರೀ ಮಳೆ; ಸರಣಿ ಅವಘಡಗಳಿಂದ ಜನ ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ರೀತಿ ಭಾರೀ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು ಜಿಲ್ಲೆಗಳಲ್ಲಿ ಜನಜೀವನ ಏರುಪೇರಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆ ಭಾರೀ ಮಳೆಯಾಗುತ್ತಿದೆ. ಕಳೆದೆರಡು ದಿನಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಭಾರೀ ಮಳೆಯೂ ಸರಣಿ ಅವಘಡಗಳಿಗೂ ಕಾರಣವಾಗಿವೆ.

ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿವೆ. ಕುಂದಾಪುರ, ಕಾರ್ಕಳ ತಾಲೂಕುಗಳ ಹಲವು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಜನರು ಸಂಕಷ್ಟಕ್ಕೊಳಗಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರೀ ಮಳೆ ಸರಣಿ ಅನಾಹುತಗಳಿಗೆ ಕಾರಣವಾಗಿವೆ. ಇನ್ನೊಂದೆಡೆ ಹಾಸನ ಜಿಲ್ಲೆಯಲ್ಲೂ ಮಳೆ ಸಂಬಂಧಿ ಘಟನೆ ಸಂಭವಿಸಿದೆ. ಶಿರಾಡಿ ಘಾಟಿ ಹೆದ್ದಾರಿಯಲ್ಲಿ ಭೂಕುಸಿತದಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ ಎನ್ನಲಾಗಿದೆ.

Related posts