ರಾಜ್ಯದಲ್ಲಿ ಈ ತಿಂಗಳ ಅಂತ್ಯದವರೆಗೂ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ರೀತಿ ಭಾರೀ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು ಜಿಲ್ಲೆಗಳಲ್ಲಿ ಜನಜೀವನ ಏರುಪೇರಾಗಿದೆ. ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು, ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ ಮತ್ತು ಬೆಳಗಾವಿಯಲ್ಲಿ ಆರೆಂಜ್ ಅಲರ್ಟ್, ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಲಿದ್ದು, ಮೈಸೂರು, ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲೂ ಭಾರಿ ಮಳೆಯಾಗಲಿದೆ.

ಬೆಳಗಾವಿ ಮತ್ತು ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಗದಗದಲ್ಲಿ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts