ಬೆಂಗಳೂರು: ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದ ಅವರು “ಇನ್ನು ಮುಂದೆ ಯಾವುದೇ ಅವಘಡ ಆಗದಂತೆ ಎಚ್ಚರವಹಿಸಲಾಗುವುದು. ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟೀಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು ಸೂಚನೆ ನೀಡಿರುವುದಾಗಿ ಹೇಳಿದರು.
ತಮಿಳುನಾಡಿನ ಕಾರ್ಮಿಕರು ದುರಂತದಲ್ಲಿ ಸಾವನ್ನಪ್ಪಿದ್ದಾರೆ, ಯುವಕರ ಸಾವು ದುಃಖಕರ ಸಂಗತಿ. ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ತಮಿಳುನಾಡಿನವರು 3 ಲಕ್ಷ ಮೊತ್ತದ ಚೆಕ್ ಈಗಾಗಲೇ ವಿತರಣೆ ಮಾಡಿದ್ದಾರೆ. ಅವಘಡಕ್ಕೆ ಏನು ಕಾರಣ ಎಂದು ಶೀಘ್ರ ತನಿಖೆ ನಡೆಸಲಾಗುವುದು ಎಂದರು.
ಒಳಗೆ ಹೋಗಲು ಆಗದ ಕಾರಣ ಕಟ್ಟಡದ ಹಿಂದಿನ ಗೋಡೆ ಒಡೆದು ಹಾಕುವಂತೆ ಸೂಚನೆ ನೀಡಿದ್ದೆ. ಇನ್ನು ಮುಂದೆ ಅಯಾಮಕರ ಸಾವು ಸಂಭವಿಸದಂತೆ ಮುನ್ನೆಚರಿಕೆವಹಿಸುತ್ತೇವೆ. ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ, ಯುವಕರ ಸಾವು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ದುರಂತ ನಡೆದ ಸ್ಥಳ ಪರಿಶೀಲನೆಗೆ ಹೋಗುತ್ತಿದ್ದು, ನಾನು ಹೋಗುತ್ತಿದ್ದೇನೆ ಎಂದು ತಿಳಿಸಿದರು.