ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಅವಧಿ ಜೂನ್‌ 30ರವರೆಗೆ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಮತ್ತಷ್ಟು ಅವಕಾಶ ದೊರೆತಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜೂನ್‌ 17ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಶರತ್ತುಗಳಿಗೆ ಒಳಪಟ್ಟು 2025–26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ.

ಆದೇಶದಂತೆ, ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳ ವರ್ಗಾವಣೆ ನಿರ್ಧಾರವನ್ನು ಸಂಬಂಧಿತ ಇಲಾಖಾ ಸಚಿವರಿಗೆ, ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ನೌಕರರ ವರ್ಗಾವಣೆ ಆಯ್ಕೆ ಅಧಿಕಾರವನ್ನು ನೇಮಕಾತಿ ಪ್ರಾಧಿಕಾರಗಳಿಗೆ ನೀಡಲಾಗಿರುವ ಅವಧಿಯನ್ನೂ ಜೂನ್‌ 30ರವರೆಗೆ ವಿಸ್ತರಿಸಲಾಗಿದೆ.

Related posts