ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಯೋಚನೆ ಸದ್ಯಕ್ಕಿಲ್ಲ; ಸಿದ್ದರಾಮಯ್ಯ

ಬೆಂಗಳೂರು: ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಚಿವ ಸಂಪುಟ ವಿಸ್ತರಣೆಯನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಅವರು ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು.

ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ ಎಂದವರು ಸ್ಪಷ್ಟಪಡಿಸಿದರು.

Related posts