ರೈತರ ಜಮೀನಿಗೆ ವಕ್ಫ್ ಮಂಡಳಿ ಕನ್ನ ಹಾಕಿರುವ ಬೆಳವಣಿಗೆ ಬಗ್ಗೆ ಆಕ್ರೋಶ ಹೊರಹಾಕುತ್ತಿರುವ ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿಯ ಅನೇಕ ನಾಯಕರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಾಯಕರು, ವಕ್ಫ್ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್ ಹೆಸರು ತೆಗೆಸಿಹಾಕಬೇಕು ಎಂದು ಆಗ್ರಹಿಸಿದರು.