ರೈಲ್ವೇ ಪ್ರಯಾಣ ದರ ಏರಿಕೆಯಿಂದ ಬಡವರಿಗೆ ಬರೆ; ಸಿದ್ದರಾಮಯ್ಯ

ಬೆಂಗಳೂರು: ರೈಲ್ವೇ ಪ್ರಯಾಣ ದರ ಏರಿಕೆಯಿಂದ ಬಡವರಿಗೆ ಬರೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ. ಬಿಜೆಪಿ ನಾಯಕರ ಜಾಣಮೌನಕ್ಕೆ ಜನರೇ ಬುದ್ದಿ ಕಲಿಸುತ್ತಾರೆ ಎಂದವರು ಹೇಳಿದ್ದಾರೆ.

ಚಿತ್ರದುರ್ಗದ ಹಿರಿಯೂರು ಬಳಿಯ ಬಸ್ ಮತ್ತು ಟ್ರಕ್ ನಡುವಿನ ಅಪಘಾತದಲ್ಲಿ ಟ್ರಕ್ ಚಾಲನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದವರು ತಿಳಿಸಿದ್ದಾರೆ.

Related posts