ಮಂಗಳೂರು: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ಜಯ ಸಾಧಿಸಿರುವುದಕ್ಕೆ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಗೆಲುವಿನ ಮೂಲಕ ಗಾಂಧಿ ಕುಟುಂಬದ ಮತ್ತೂಬ್ಬ ಮಹಿಳಾ ನಾಯಕಿ ಲೋಕಸಭೆ ಪ್ರವೇಶಿಸಿದ್ದಾರೆ ಎಂದು ಜನಾರ್ದನ ಪೂಜಾರಿ ಮಾಧ್ಯಮ ಹೇಳಿಕೆಯಲ್ಲಿ ಬಣ್ಣಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಜನತೆಗೆ ನೀಡಿದ ಗ್ಯಾರಂಟಿ ಯೋಜನೆಗಳು, ಉತ್ತಮ ಆಡಳಿತದಿಂದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟಿದ್ದಾರೆ. ಅದರಂತೆ ಮತ ಚಲಾಯಿಸಿ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವಂತಾಗಿದೆ ಎಂದು ಜನಾರ್ದನ ಪೂಜಾರಿ ಹೇಳಿದ್ದಾರೆ.