ವಿಜಯಪುರ: ವಿಜಯಪುರ ಜಿಲ್ಲೆಯ ಅಲ್-ಅಮೀನ್ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ನಡೆದಿರುವ ಆರೋಪ ಕೇಳಿಬಂದಿದೆ. ಹಿರಿಯ ವಿದ್ಯಾರ್ಥಿಗಳು ಕಾಶ್ಮೀರ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಫೆಬ್ರವರಿ 18 ರಂದು ಕ್ರಿಕೆಟ್ ಪಂದ್ಯ ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳು ಗಲಾಟೆ ನಡೆಸಿದ್ದು, ಬಳಿಕ ರಾತ್ರಿ ಹಾಸ್ಟೇಲ್ನಲ್ಲಿ ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.