ಬೆಂಗಳೂರು: ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಮತ್ತಿಬ್ಬರು ಬಲಿಯಾಗಿದ್ದಾರೆ. ವಿದ್ಯುತ್ ಕಂಬ ತಲೆ ಮೇಲೆ ಬಿದ್ದು 4 ತಿಂಗಳ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಸದ್ದುಗುಂಟೆ ಪಾಳ್ಯದಲ್ಲಿ ಸೋಮವಾರ ನಡೆದಿದೆ.
ರಸ್ತೆ ಕಾಮಗಾರಿ ನಡೆಯುವ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದಿತ್ತು. ಆ ಕಂಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮತಿ (35) ಮತ್ತು ಸೋನಿ ( 36) ಎಂಬ ಮಹಿಳೆಯರ ಮೇಲೆ ಬಿದ್ದಿದೆ ಎನ್ನಲಾಗಿದೆ. ಈ ಇಬ್ಬರೂ ಮೃತಪಟ್ಟಿದ್ದು, ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.