ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಾಲೀಮಿನಲ್ಲಿ ತೊಡಗಿದೆ. ಈ ನಡುವೆಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ವಿಧಾನ ಪರಿಷತ್ನ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕ್ಷರ ಕ್ಷೇತ್ರ, ಆಗ್ನೇಯ ಶಿಕ್ಷಕ್ಷ ಮತ್ತು ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣಾ ನಡೆಯಲಿದ್ದು, ಕಳೆದ ವಿಧಾನಸಭೆಯಲ್ಲಿ ಸ್ಪರ್ಧಿಸಿ ಸುಂಡಿರುವ ಪುಟ್ಟಣ್ಣ ಅವರಿಗೆ ಕಾಂಗ್ರೆಸ್ ಈ ಬಾರಿಯ ಮೇಲ್ಮನೆ ಅಖಾಡಕ್ಕೆ ಇಳಿಸಿ ಸ್ಪರ್ಧೆಗೆ ರೋಚಕತೆ ತುಂಬಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ:
-
ಬೆಂಗಳೂರು ಪದವೀಧರ ಕ್ಷೇತ್ರ- ರಾಮೋಜಿಗೌಡ
-
ಬೆಂಗಳೂರು ಶಿಕ್ಷಕರ ಕ್ಷೇತ್ರ- ಪುಟ್ಟಣ್ಣ
-
ನೈಋತ್ಯ ಶಿಕ್ಷಕರ ಕ್ಷೇತ್ರ-ಕೆ.ಕೆ.ಮಂಜುನಾಥ್
-
ಆಗ್ನೇಯ ಶಿಕ್ಷಕರ ಕ್ಷೇತ್ರ-ಟಿ.ಡಿ.ಶ್ರೀನಿವಾಸ್
-
ಈಶಾನ್ಯ ಪದವೀಧರ ಕ್ಷೇತ್ರ-ಡಾ.ಚಂದ್ರಶೇಖರ ಪಾಟೀಲ್
Congress President Mallikarjun Kharge has approved the following persons as party candidates for the forthcoming biennial elections to the Karnataka Legislative Council from the Graduates'/Teachers' Constituencies: Congress pic.twitter.com/YxfNr5fmdi
— ANI (@ANI) October 29, 2023