ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ನಟ ಶಿವಣ್ಣ ಶೀಘ್ರ ಗುಣಮುಖರಾಗಲಿ; ಸಿಎಂ ಶುಭ ಹಾರೈಕೆ

ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಬೇಗನೆ ಚೇತರಿಸಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ. ತಾವು ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. .

ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, ‘ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದಾರೆ.


ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ’ ಎಂದಿರುವ ಸಿದ್ದರಾಮಯ್ಯ, ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು‌ ಕಾಪಾಡಲಿದೆ ಎಂದು ವಿಸ್ವಾಸ ವ್ಯಕ್ತಪಡಿಸಿದ್ದಾರೆ.

Related posts